ನೆನಪಿನ ಬುತ್ತಿ – I – ಅಜ್ಜಿ ಮನೆ – ಭಾಗ – ೧ ಪಾರಿಜಾತದ ಘಮವೂ, ಲಿಲಿ ಹೂವಿನ ಕಿಲಕಿಲವೂ..,
ಮೊನ್ನೆ ಶೋಭ ದೊಡ್ಡಮ್ಮ ತಮ್ಮ ಮನೆಗೆ ತಂದು ನೆಟ್ಟು ಬೆಳೆಸಿದ ಪಾರಿಜಾತದ ಗಿಡ/ಮರದ ಬಗ್ಗೆ ತಮ್ಮ ಬಾಂಧವ್ಯದ ಭಾವಗಳನ್ನು ಬಿಚ್ಚಿಟ್ಟಾಗ ನನಗೂ ನಮ್ಮ ಅಜ್ಜಿ ಮನೆಯಲ್ಲಿದ್ದ ಪಾರಿಜಾತದ ನೆನಪು ಮತ್ತೆ ಮರುಕಳಿಸಿತು.
ಪಾರಿಜಾತ … ಅದರ ಘಮ ಅನುಭವಿಸಿದವರಿಗೇ ಗೊತ್ತು. ಅದರ ಹಸಿರ ಹಾಸಿಗೆಯ ಮೇಲೆ ಹರಡಿದ ಶುಭ್ರ ಬಿಳಿಯ ಬಣ್ಣದ ಹೂವುಗಳ ಚೆಂದ ಅಕ್ಷರಗಳಲ್ಲಿ …

